ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಮೂವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

Re-Accredited B+ by NAAC

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಮೂವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪತ್ರಕರ್ತರ ಸಂಘದ ರಾಷ್ಟ್ರೀಯ  ಸಮಿತಿ ಸದಸ್ಯರಾದ ಎಸ್. ಎ. ಮುರುಳಿಧರ್ ಅವರು ತಮ್ಮ ಸಹೋದರ ಗಣೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡ ಮಂಡೇಡ ಎಸ್. ಅಶೋಕ್ ಅವರ ‘ಪ್ರೀಮಿಯರ್ ಲೀಗ್ ಇಂದು ಅಂತಿಮ ಪೈಪೋಟಿ’ ವರದಿ ಪಡೆದುಕೊಂಡಿದೆ.  ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ತಮ್ಮ ಸೋದರ ಮಾವಂದಿರಾದ ದೇಯಂಡ ಪೂಣಚ್ಚ ಹಾಗೂ ಉಮೇಶ್ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಎ. ಎನ್. ವಾಸು ಅವರ ‘ನನಸಾಗದ ಪುನರ್ವಸತಿ ಕನಸು’ ವರದಿ ಆಯ್ಕೆಯಾಗಿದೆ.   ವಿರಾಜಪೇಟೆ ತಾಲ್ಲೂಕು ಸಂಘದ ಅಧ್ಯಕ್ಷರಾಗಿದ್ದ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ ಅವರು ತಮ್ಮ ತಂದೆ ಸಣ್ಣುವಂಡ ಮಾದಪ್ಪ ಹಾಗೂ ತಾಯಿ ಜಾನಕಿ ಮಾದಪ್ಪ ಅವರ ಜ್ಞಾಪಕಾರ್ಥವಾಗಿ ಸ್ಥಾಪಿಸಿರುವ ಅತ್ಯುತ್ತಮ ಪರಿಸರ ಕುರಿತ ವರದಿ ಪ್ರಶಸ್ತಿಯು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಅಮ್ಮಣಿಚಂಡ ಪ್ರವೀಣ್ ಚಂಗಪ್ಪ ಅವರ ‘ಕೈಹಿಡಿಯಿತು ಹೈನುಗಾರಿಕೆ ಉದ್ದಿಮೆ’ ವರದಿಗೆ ಲಭಿಸಿದೆ.ಪ್ರಶಸ್ತಿಯನ್ನು ಸೆ.19 ರಂದು ನಡೆಯುವ ಮಹಾಸಭೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ತಿಳಿಸಿದ್ದಾರೆ.

%d bloggers like this: